ಸಹಕಾರಿ ಬ್ಯಾಂಕ್ ಪ್ರಗತಿಗೆ ರೈತರ ಸಹಕಾರ ಮುಖ್ಯ

21 RON 1
Published on

ರೋಣ: ಸರ್ಕಾರದಿಂದ ಬರುವ ಯೋಜನೆಗಳನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕು. ಸಹಕಾರಿ ಬ್ಯಾಂಕ್‌ನಿಂದ ಪಡೆದುಕೊಂಡ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸಬೇಕು. ಸಹಕಾರಿ ಬ್ಯಾಂಕ್ ಜತೆ ಎಲ್ಲ ರೈತರು ಒಗ್ಗಟ್ಟಿನಿಂದ ಕೈಜೋಡಿಸಿದಾಗ ಯಶಸ್ಸು ಹಾಗೂ ಪ್ರಗತಿ ಸಾಧ್ಯ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಐ.ಎಸ್. ಪಾಟೀಲ ಹೇಳಿದರು.

ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

ರೋಣ ತಾಲೂಕಿನಲ್ಲಿ ಬರಗಾಲ ಆವರಿಸಿದ್ದು, ಸರ್ಕಾರ ಸಾಲ ಮನ್ನಾ ಅಥವಾ ಸಾಲದ ಮೇಲಿನ ಬಡ್ಡಿಯನ್ನಾದರೂ ಮನ್ನಾ ಮಾಡುವ ಮೂಲಕ ರೈತರ ನೆರವಿಗೆ ಬರಬೇಕು ಎಂದರು.

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಬಸವರಾಜ ನವಲಗುಂದ ಮಾತನಾಡಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಎಲ್ಲರ ವಿಶ್ವಾಸವನ್ನು ಗಳಿಸಿದೆ. ಉತ್ತಮ ಗ್ರಾಹಕರು ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿ ಸಂಘದ ಬೆಳವಣಿಗೆಗೆ ಸಹಕರಿಸಬೇಕು ಎಂದರು. ದಶರಥ ಗಾಣಿಗೇರ, ಎ.ಆರ್. ಮಲ್ಲನಗೌಡ್ರ, ಜಿ.ವೈ. ಕುರಿ, ಆರ್.ಎ. ಪಲ್ಲೇದ, ಬಿ.ಎಸ್. ಕರಿಗೌಡ್ರ, ಬಿ.ಡಿ.ಬ್ಯಾಳಿ, ಬಿ.ಎಸ್. ರಡ್ಡೆರ, ಐ.ಸಿ. ರಾಠೋಡ, ರೂಪಾ ಅಂಗಡಿ, ಅನುಸೂಯಾ ಪರಡ್ಡಿ, ಕೆ.ಎಸ್. ಗೌಡರ, ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net