

ಪಡುಬಿದ್ರಿ: ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಈ ಬಾರಿ ಹಲವು ಶಾಶ್ವತ ಯೋಜನೆಗಳನ್ನು ಕಾರ್ಯಗತಗೊಳಿಸಲು ಮಹಾಜನ ಸಂಘ ನಿರ್ಧರಿಸಿದ್ದು, ಗ್ರಾಮಸಭೆಗಳು ಸಹಕಾರ ನೀಡಲು ಮುಂದೆ ಬರಬೇಕು ಎಂದು ದ.ಕ.ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ ಹೇಳಿದರು.
ದಕ್ಷಿಣ ಕನ್ನಡ ಮೊಗವೀರ ಮಹಾಸಭಾ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮ್ಮೀ ದೇವಳದ ವತಿಯಿಂದ ಮಹಾಜನ ಸಂಘದ ಆಡಳಿತ ಪದಾಧಿಕಾರಿಗಳು ಭಾನುವಾರ ಹೆಜಮಾಡಿಯ ಗುಂಡಿ ಮೊಗವೀರ ಮಹಾಸಭಾದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ವೇಳೆ ಮಾತನಾಡಿದರು.
ಗುಂಡಿ ಮೊಗವೀರ ಮಹಾಸಭಾದ ಅಧ್ಯಕ್ಷ ದಿವಾಕರ ಹೆಜ್ಮಾಡಿಯವರಿಗೆ ಜಯ ಸಿ.ಕೋಟ್ಯಾನ್ ಮಹಾಜನ ಸಂಘದ ಮನವಿ ಹಸ್ತಾಂತರಿಸಿದರು.ಮೊಗವೀರ ಮಹಾಜನ ಸಂಘದ ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಾಜನ ಸಂಘದ ಸಮಿತಿ ಸದಸ್ಯರಾದ ಯಾದವ ವಿ.ಕೆ., ಕಿರಣ್ ಕುಮಾರ್ ಉದ್ಯಾವರ ಮತ್ತು ದಿನೇಶ್ ಎರ್ಮಾಳ್, ಶ್ರೀ ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕರೆ, ಗುಂಡಿ ಮೊಗವೀರ ಮಹಾಸಭಾದ ಗುರಿಕಾರ ಲೋಕನಾಥ ಗುರಿಕಾರ, ಪ್ರಧಾನ ಕಾರ್ಯದರ್ಶಿ ದಿನೇಶ್ ಸುವರ್ಣ, ಮಹಿಳಾ ವಿಭಾಗದ ಅಧ್ಯಕ್ಷೆ ಶುಭಾ ದಿನೇಶ್, ಮಹಾಸಭಾದ ಜತೆ ಕಾರ್ಯದರ್ಶಿ ಯತೀಶ್ ಕೋಟ್ಯಾನ್, ಕೋಶಾಧಿಕಾರಿ ಮೋಹಿತ್ ಸಾಲ್ಯಾನ್ ಉಪಸ್ಥಿತರಿದ್ದರು.