ಶೈಕ್ಷಣಿಕ ಪ್ರಗತಿಗೆ ಸಂಘ-ಸಂಸ್ಥೆಗಳ ಸಹಕಾರಿ

ಕಾರಟಗಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಸುಜ್ಞಾನ ನಿಧಿ ಶಿಷ್ಯ ವೇತನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಮಂಜುರಾತಿ ಪತ್ರ ವಿತರಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಮೇಶ ಕುಲಕರ್ಣಿ, ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ್ ಮಸ್ಕಿ, ತಾಲೂಕು ಯೋಜನಾಧಿಕಾರಿ ಡಿ.ನಿಂಗಪ್ಪ ಇತರರಿದ್ದರು.

Published on

ಕಾರಟಗಿ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಸಂಘ-ಸಂಸ್ಥೆಗಳ ಕಾರ್ಯ ಮಹತ್ವದ್ದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಪಟ್ಟಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸಾಮಾಜಿಕ ಸಾಕ್ಷರತೆಗಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಅಗತ್ಯ ಸೌಲಭ್ಯಗಳನ್ನು ನೀಡುತ್ತಿದೆ. ಶೈಕ್ಷಣಿಕ ಪ್ರಗತಿಗೆ ಸಂಘ-ಸಂಸ್ಥೆಗಳ ಸಾಮಾಜಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದರು.

ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರಕಾಶರಾವ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕಾಗಿ ಪ್ರತಿ ತಿಂಗಳು ಶಿಷ್ಯ ವೇತನ ನೀಡಲಾಗುತ್ತಿದೆ. ಈವರೆಗೆ ರಾಜ್ಯದಲ್ಲಿ 152.75 ಕೋಟಿ ರೂ. ಶಿಷ್ಯವೇತನ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಪ್ರತಿ ತಿಂಗಳು 400ರಿಂದ 1000 ರೂ. ವರೆಗೆ ಶಿಷ್ಯವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು. ತಾಲೂಕಿನ 127 ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮಂಜೂರಾತಿ ಪತ್ರ ವಿತರಿಸಲಾಯಿತು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಮೇಶ ಕುಲಕರ್ಣಿ, ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ್ ಮಸ್ಕಿ, ತಾಲೂಕು ಯೋಜನಾಧಿಕಾರಿ ಡಿ.ನಿಂಗಪ್ಪ, ಮೇಲ್ವಿಚಾರಕರಾದ ಎನ್.ಗಂಗಾಧರಪ್ಪ, ಚಂದ್ರು, ಸುರೇಶ್, ಶೀಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net