ಎಚ್.ಟಿ.ಕೃಷ್ಣೇಗೌಡಗೆ ಸಹಕಾರಿ ಪ್ರಶಸ್ತಿ: ಡಿ.18ರಂದು ನಗರದಲ್ಲಿ ಪ್ರದಾನ ಸಮಾರಂಭ

Cooperative Award Ceremony Mandya
Published on

ಮಂಡ್ಯ: ಕರ್ನಾಟಕ ಸಂಘದಿಂದ ಹಿರಿಯ ಸಹಕಾರಿ ಎಸ್.ಎಂ.ಲಿಂಗಪ್ಪ ಹೆಸರಿನಲ್ಲಿ ಕೊಡಮಾಡುವ ಪ್ರಥಮ ವರ್ಷದ ಪ್ರಶಸ್ತಿಗೆ ನಾಗಮಂಗಲ ತಾಲೂಕು ಹೊನ್ನೇನಹಳ್ಳಿ ಗ್ರಾಮದ ಸಹಕಾರಿ ಎಚ್.ಟಿ.ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಸಂಘದ ನಿರ್ದೇಸಕ ಜಯರಾಂ ಕೋಣನಹಳ್ಳಿ, ಡಿ.18ರಂದು ಸಂಜೆ 5.30ಕ್ಕೆ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ 25 ಸಾವಿರ ರೂ ಜತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅಧ್ಯಕ್ಷತೆಯನ್ನು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ವಹಿಸಲಿದ್ದು, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಪ್ರಶಸ್ತಿ ಪ್ರದಾನ ಮಾಡುವರು. ಎಸ್.ಎಂ.ಲಿಂಗಪ್ಪ ಅವರನ್ನು ಕುರಿತು ನಿವೃತ್ತ ಪ್ರಾಂಶುಪಾಲ ಕೆ.ಎನ್.ಚಂದ್ರಮೋಹನ್ ಮಾತನಾಡಲಿದ್ದು, ನಿವೃತ್ತ ಪ್ರಾಂಶುಪಾಲ ಡಾ.ಬಿ.ಕೆ.ಲೋಕೇಶ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆಂದು ವಿವರಿಸಿದರು.

ಕರ್ನಾಟಕ ಸಂಘದ ಕಾರ್ಯರ್ಶಿ ಲೋಕೇಶ್ ಚಂದಗಾಲು, ನಿರ್ದೇಶಕ ನಾಗಪ್ಪ, ರಾಜಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net