ರಾಜ್ಯಪಾಲರ ಅಂಗಳಕ್ಕೆ ಸಹಕಾರ ವಿಧೇಯಕಗಳು

KNR_Governor
Published on

ತುಮಕೂರು: ಮರು ಪರಿಶೀಲನೆಗಾಗಿ ರಾಜಭವನದಿಂದ ವಾಪಸಾಗಿದ್ದ ವಿಧೇಯಕಗಳನ್ನು ಮರು ಪರಿಶೀಲಿಸಿ ರಾಜ್ಯಪಾಲರ ಅನುಮೋದನೆಗೆ ಮತ್ತೆ ಸಲ್ಲಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್​.ರಾಜಣ್ಣ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ ಸೇರಿದಂತೆ ವಿವಿಧ 11 ವಿಧೇಯಕಗಳ ಅನುಮೋದನೆಗಾಗಿ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತ್ತು. ಈ ವಿಧೇಯಕಗಳ ಮರು ಪರಿಶೀಲನೆ ಅಗತ್ಯದ ಬಗ್ಗೆ ರಾಜ್ಯಪಾಲರು ವಾಪಸ್ಸು ಕಳುಹಿಸಿದ್ದರು. ಶೀಘ್ರವೇ ಮರು ಪರಿಶೀಲಿಸಿ ಪುನ@ ಅನುಮೋದನೆಗೆ ಸಲ್ಲಿಸಲಾಗುವುದು ಎಂದರು.

ವಿಧಾನಸಭೆಯಲ್ಲಿ ಅಂಗೀಕಾರವಾಗಿ ವಿಧಾನಪರಿಷತ್ತಿನಲ್ಲಿ ಈ ಮಸೂದೆಗಳನ್ನು ಮಂಡಿಸಲಾಗಿತ್ತು. ಅಲ್ಲದೆ, ಶಾಸಕರ ಅಭಿಪ್ರಾಯದಂತೆ ಸದನ ಸಮಿತಿಯನ್ನೂ ಮಾಡಿ ವಿಧೇಯಕಗಳನ್ನು ಅಂಗೀಕರಿಸಲಾಗಿತ್ತು. ಆದರೆ ಪ್ರತಿಪಕ್ಷಗಳು ಚರ್ಚೆಯಲ್ಲಿ ಭಾಗವಹಿಸದೆ ಸಭಾತ್ಯಾಗ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡಿದ್ದಾರೆ. ಆದಾಗ್ಯೂ ಸರ್ಕಾರ ಈ ವಿಷಯದಲ್ಲಿ ಸಮರ್ಪಕವಾಗಿ ನಡೆದುಕೊಂಡಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net