ಸಹಕಾರ, ಅಭಿವೃದ್ಧಿ ಚಿಂತನೆ: ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ

Mul_Parade
Published on

ವಿಜಯವಾಣಿ ಸುದ್ದಿಜಾಲ ಮೂಲ್ಕಿ

ಮೂಲ್ಕಿಯ ಸಮಗ್ರ ಅಭಿವೃದ್ಧಿ ದೃಷ್ಟಿಕೋನವಿರಿಸಿ ವಿವಿಧ ಯೋಜನೆ ಹಮ್ಮಿಕೊಳ್ಳಲಾಗುತ್ತಿದ್ದು, ಯುವ ಜನತೆ ದೇಶಕ್ಕಾಗಿ ಹಿರಿಯರು ನೀಡಿದ ತ್ಯಾಗ ಬಲಿದಾನಗಳ ಜತೆಗೆ ಪರಸ್ಪರ ಸಹಕಾರ ಅಭಿವೃದ್ಧಿ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದರು.
ಮೂಲ್ಕಿ ಕಾರ್ನಾಡು ಗಾಂಧಿ ಮೈದಾನದಲ್ಲಿ ಗುರುವಾರ ಮೂಲ್ಕಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಮಾತನಾಡಿದರು.

ಮೂಲ್ಕಿ ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಧ್ವಜಾರೋಹಣ ನೆರವೇರಿಸಿದರು. ಮೂಲ್ಕಿ ನಪಂ ಆಡಳಿತಾಧಿಕಾರಿ ಮಧುಕರ್ ಕೆ., ಪಂಚಾಯಿತಿ ಮಾಜಿ ಅಧ್ಯಕ್ಷ ಸುಭಾಷ್ ಶೆಟ್ಟಿ, ಸುನೀಲ್ ಆಳ್ವ, ಸದಸ್ಯರಾದ ಪುತ್ತು ಬಾವ, ಹರ್ಷರಾಜ ಶೆಟ್ಟಿ, ಸತೀಶ್ ಅಂಚನ್, ಬಾಲಚಂದ್ರ ಕಾಮತ್, ಯೋಗೀಶ್ ಕೋಟ್ಯಾನ್, ಶೈಲೇಶ್ ಕುಮಾರ್, ದಯಾವತಿ ಅಂಚನ್, ಶಾಂತಾ ಕಿರೋಡಿಯನ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್ ಕೆ., ಇಒ ಲೋಕೇಶ್, ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ, ಮೂಲ್ಕಿ ಪೊಲೀಸ್ ನಿರೀಕ್ಷಕ ವಿದ್ಯಾಧರ್, ಉಪ ತಹಸೀಲ್ದಾರ್ ದಿಲೀಪ್ ರೋಡ್ಕರ್, ಮೂಡುಬಿದಿರೆ ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಮೂಲ್ಕಿ ವಿಜಯಾ ಕಾಲೇಜು ಪ್ರಾಂಶುಪಾಲರಾದ ಶ್ರೀಮಣಿ ಶೆಟ್ಟಿ, ಫಮಿದಾ ಬೇಗಂ, ಮತ್ತಿತರರು ಉಪಸ್ಥಿತರಿದ್ದರು. ವಕೀಲ ಭಾಸ್ಕರ ಹೆಗ್ಡೆ ನಿರೂಪಿಸಿದರು.

ಸಾಧಕರಿಗೆ ಗೌರವಾರ್ಪಣೆ

ಪರೇಡ್ ಕಮಾಂಡೆಂಟ್ ಎಸ್.ಐ ಮಾರುತಿ ಹಾಗೂ ಎಸ್.ಐ ಅನಿತಾ ನೇತೃತ್ವದಲ್ಲಿ ಮೂಲ್ಕಿ ಪೊಲೀಸ್, ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ ಮಕ್ಕಳ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವತಿಯಿಂದ ಆಕರ್ಷಕ ಪಥಸಂಚಲನ ನಡೆಯಿತು. ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿ ಪಡೆದ ಮೂಲ್ಕಿ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರನ್ನು ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net