

ಬೆಂಗಳೂರು:ಸಹಕಾರ ಸಂಸ್ಥೆಗಳು ಬಹುಸೇವಾ ಸಂಸ್ಥೆಗಳಾಗಿ ರೂಪುಗೊಂಡು ಆರ್ಥಿಕವಾಗಿ ಬಲಗೊಳ್ಳಬೇಕು ಎಂದು ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ ಗುರುವಾರ ನಗರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸಹಕಾರ ಚಳವಳಿ ಬೆಳವಣಿಗೆ ಸದೃಢವಾಗಿದೆ. ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ ಸಹಕಾರ ಚಳವಳಿಯ ಮಾಹಿತಿ ಲಭ್ಯವಾಗಬೇಕು. ಆ ನಿಟ್ಟಿನಲ್ಲಿ ಯೂನಿಯನ್‌ಗಳು ಮಾಹಿತಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು. ಸಹಕಾರ ಚಳವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಭಾಗಿಯಾಗಬೇಕು. ಸಹಕಾರಿಗಳು ತ್ಯಾಗ ಮನೋಭಾವದಿಂದ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಯುವಜನರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
ಮಹಾಮಂಡಳ ಎಂಡಿ ಕೆ.ಎಸ್.ನವೀನ್, ಉಪಾಧ್ಯಕ್ಷ ಜಗದೀಶ್ ಎಂ. ಕವಟಗಿಮಠ ಸೇರಿ ಆಡಳಿತ ಮಂಡಳಿ ನಿರ್ದೇಶಕರು ಉಪಸ್ಥಿತರಿದ್ದರು.