

ಮಡಿಕೇರಿ:
ಕೂರ್ಗ್ ರಿಕ್ರಿಯೇಷನ್ ವತಿಯಿಂದ ಕೊಡಗಿನ ಹೋಂಸ್ಟೇ, ಹೊಟೇಲ್ ಹಾಗೂ ರೆಸಾರ್ಟ್‌ಗಳ ಮಾಲೀಕರು ಹಾಗೂ ಸಿಬ್ಬಂದಿಗಾಗಿ ಕೂರ್ಗ್ ಕ್ರಿಕೆಟ್ ಕ್ಲ್ಯಾಶ್-೨೦೨೪ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ರಿಕ್ರಿಯೇಷನ್ ಪ್ರಮುಖ ಕೆ.ಜಿ. ಮದನ್ ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.೭, ೮ ಹಾಗೂ ೯ ರಂದು ಬೌಂಡರಿ ಬ್ಯಾಟಲ್ ಬಾಕ್ಸ್ ಕ್ರಿಕೆಟ್ ಹಾಗೂ ಸ್ಮ್ಯಾಶ್ ಬ್ಯಾಷ್ ಎಂಬ ಎರಡು ವಿಭಾಗಗಳಲ್ಲಿ ಪಂದ್ಯಾವಳಿ ನಡೆಯಲಿದೆ.
ಬೌಂಡರಿ ಬ್ಯಾಟಲ್ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ ಕೊಡಗಿನಲ್ಲಿ ಇದೇ ಪ್ರಥಮ ಬಾರಿಗೆ ನಡೆಸಲಾಗುತ್ತಿದೆ. ವಿಜೇತ ತಂಡಕ್ಕೆ ೩೦ ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಸ್ಮ್ಯಾಶ್ ಬ್ಯಾಷ್ ಟೆನ್ನಿಸ್ ಬಾಲ್ ಪಂದ್ಯಾವಳಿ ವಿಜೇತ ತಂಡಕ್ಕೆ ೫೦ ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.
ಪಂದ್ಯಾವಳಿಯಲ್ಲಿ ಹೋಂಸ್ಟೇ, ಹೊಟೇಲ್ ಮತ್ತು ರೆಸಾರ್ಟ್‌ಗಳ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಪಾಲ್ಗೊಳ್ಳಬಹುದಾಗಿದೆ. ಪ್ರತ್ಯೇಕವಾಗಿ ಪಂದ್ಯಾವಳಿ ನಡೆಯಲಿದೆ. ಈಗಾಗಲೇ ಕೆಲವು ತಂಡಗಳು ನೋಂದಾಯಿಸಿಕೊಂಡಿದ್ದು, ಸ್ಮ್ಯಾಶ್ ಬ್ಯಾಷ್ ಟೆನ್ನಿಸ್ ಬಾಲ್ ಪಂದ್ಯಾವಳಿಗೆ ಹೋಂಸ್ಟೇ, ಹೊಟೇಲ್ ಹಾಗೂ ರೆಸಾರ್ಟ್‌ಗಳ ಹೆಸರಿನಲ್ಲಿ ಜಿಲ್ಲೆಯ ಯಾರು ಬೇಕಾದರು ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾವಣಿಗೆ ಮೊ. ಸಂ. ೮೩೧೦೧೨೮೭೯೦, ೭೩೩೮೫೫೩೨೦೫ ಸಂಪರ್ಕಿಸಬಹುದಾಗಿದೆ ಎಂದು ಕೆ.ಜಿ.ಮದನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.