ಪೊಲೀಸರ ಮೇಲೆ ಹಲ್ಲೆಗೆ ಯತ್ನ

POLICE-FIR
Published on

ಬೆಳಗಾವಿ: ಇಲ್ಲಿಯ ಮಂಗಳವಾರ ಪೇಟೆಯಲ್ಲಿ ಪೊಲೀಸರು ಮತ್ತು ಮೂವರ ಮಧ್ಯೆ ಸಂಘರ್ಷ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದು, ಇಬ್ಬರು ಪರಾರಿಯಾಗಿದ್ದಾರೆ.

ಆರೋಪಿಗಳು ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ರೌಡಿ ಶೀಟರ್ ಪಟ್ಟಿಯಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಳ್ಳಬಟ್ಟಿ ಸಾರಾಯಿ ದಂಧೆ ಸೇರಿ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಅವರನ್ನು ವಶಕ್ಕೆ ಪಡೆಯಲು ತೆರಳಿದ್ದಾಗ ಪೊಲೀಸರ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ತಮ್ಮ ರಕ್ಷಣೆಗಾಗಿ ಸ್ಥಳದಿಂದ ತಪ್ಪಿಸಿಕೊಂಡು ಬಂದಿದ್ದಾರೆ.

ಬಳಿಕ ಹೆಚ್ಚಿನ ಸಿಬ್ಬಂದಿಯೊಂದಿಗೆ ಅವರ ಮನೆಗೆ ತೆರಳಿದ ಪೊಲೀಸರು, ಆಕಾಶ ಭವಾನಿ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಅನಿಲ ಹಾಗೂ ಅಕ್ಷಯ ಭವಾನಿ ಪರಾರಿಯಾಗಿದ್ದಾರೆ. ಬಂಧಿತನನ್ನು ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡ ತಂದೆ-ಮಗನ ಬಂಧನಕ್ಕೆ ಜಾಲ ಬೀಸಲಾಗಿದೆ. ಈ ಕುರಿತಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಟಿಳಕವಾಡಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವಿ.ಬಿ. ಬಡಿಗೇರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net