ಕರೊನಾ ಪ್ರಾಥಮಿಕ ಸಂರ್ಪತರಲ್ಲೇ ಸೋಂಕು ಹೆಚ್ಚು

web 2
Published on

ಚಿಕ್ಕಮಗಳೂರು: ಕಾಫಿ ನಾಡಲ್ಲಿ ಮಂಗಳವಾರ 55 ಮಂದಿಯಲ್ಲಿ ಕರೊನಾ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 758ಕ್ಕೆ ಏರಿಕೆಯಾಗಿದೆ. ಓರ್ವ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 20ಕ್ಕೇರಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಲ್ಲೇ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ.

ಚಿಕ್ಕಮಗಳೂರು ತಾಲೂಕಿನ 26, ತರೀಕೆರೆ 17, ಕಡೂರು 7, ಶೃಂಗೇರಿಯ ನಾಲ್ವರು, ಮೂಡಿಗೆರೆಯ ಒಬ್ಬರಲ್ಲಿ ದೃಢಪಟ್ಟಿದೆ. 10 ಮಂದಿ ಸಂಪೂರ್ಣ ಗುಣ ಹೊಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 758 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 394 ಮಂದಿ ಚೇತರಿಸಿಕೊಂಡಿದ್ದಾರೆ. 344 ಸಕ್ರಿಯ ಪ್ರಕರಣವಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ 58 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. 7 ದಿನಗಳ ಹಿಂದೆ ಕರೊನಾ ಆಸ್ಪತ್ರೆಗೆ ದಾಖಲಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net