ಕರೊನಾ ನಿಯಂತ್ರಣಕ್ಕೆ ಮುಂಜಾಗ್ರತೆ ಅವಶ್ಯ, ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಹಣಾಧಿಕಾರಿ ವನಶ್ರೀ ವಿಪಿನ್‌ಸಿಂಗ್ ಸಲಹೆ

bannerugatta
Published on

ಬೆಂಗಳೂರು: ಬನ್ನೇರುಘಟ್ಟದ ಜೈವಿಕ ಉದ್ಯಾನದ ಪ್ರತಿ ಸಿಬ್ಬಂದಿ ಕಡ್ಡಾಯವಾಗಿ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಕಾರ್ಯನಿರ್ವಹಣಾಧಿಕಾರಿ ವನಶ್ರೀ ವಿಪಿನ್‌ಸಿಂಗ್ ಹೇಳಿದರು.

ಉದ್ಯಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಕರೊನಾ ಹರಡದಂತೆ ಎಚ್ಚರಿಕೆವಹಿಸಬೇಕು ಎಂದು ಮನವಿ ಮಾಡಿದರು.

ಉದ್ಯಾನಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ದೊರೆತ ಬಳಿಕವೂ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಬೇಕು ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net