ಕರೊನಾಕ್ಕೆ ದ.ಕ ಜಿಲ್ಲೆಯಲ್ಲಿ ಮೊದಲ ಸಾವು?

CORONA
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಿಳೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಕರೊನಾದಿಂದ ಸಾವು ಸಂಭವಿಸಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ಮೂಲದ 45 ವರ್ಷದ ಮಹಿಳೆಗೆ ಉಸಿರಾಟದ ತೊಂದರೆಯಿಂದ ಶನಿವಾರ ಬಂಟ್ವಾಳ ತಾಲೂಕು ಆಸ್ಪತ್ರೆಗೆ ಬಂದಿದ್ದವರನ್ನು ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಶನಿವಾರ ಅವರ ಗಂಟಲು ದ್ರವ ಮಾದರಿ ಕಳುಹಿಸಲಾಗಿತ್ತು.

ಭಾನುವಾರ ಬೆಳಗ್ಗೆ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಸಾವಿಗೀಡಾಗಿದ್ದಾರೆ.

ಮೃತರ ಪತಿ, ಮಗನನ್ನು ಕ್ವಾರಂಟೈನ್ ಮಾಡಲಾಗಿದೆ. ಅತ್ತೆಯ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮೂವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಮೃತ ಮಹಿಳೆಯ ಮಗ ಮಾ.16 ರಂದು ದುಬೈನಿಂದ ಬಂದಿದ್ದ ಎನ್ನಲಾಗಿದೆ. ಬಂಟ್ವಾಳದಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಬಂಟ್ವಾಳ ಕೆಳಗಿನ ಪೇಟೆ ಸೀಲ್ಡೌನ್ ಮಾಡಲಾಗಿದೆ. ಯಾರೂ ಮನೆಯಿಂದ ಹೊರಬರಬೇಡಿ ಎಂದು ಬಂಟ್ವಾಳ ನಗರ ಪೊಲೀಸರಿಂದ ಜೀಪ್‌ನಲ್ಲಿ ಅನೌನ್ಸ್ಮೆಂಟ್ ಮಾಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net