

ಮಂಗಳೂರು: ವೆನ್ಲಾಕ್ ಕೋವಿಡ್ ಆಸ್ಪತ್ರೆ ಮತ್ತು 7 ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಇರುವ ಕಾರಣ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯ ಕೋವಿಡ್ ರೋಗಿಗಳು ಚಿಕಿತ್ಸೆಗೆ ಅಗಮಿಸುತ್ತಿದ್ದಾರೆ. ಈ ಪೈಕಿ ಕೆಲವರು ಇತರ ರೋಗಗಳಿಂದ ಬಳಲುತ್ತಿದ್ದು ಕೊನೇ ಹಂತದಲ್ಲಿ ಕರೊನಾ ಸೋಂಕು ಬಾಧಿಸಿರುವುದರಿಂದ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕರೊನಾ ನಿರ್ವಹಣೆಯಲ್ಲಿ ಜಿಲ್ಲಾಡಳಿತ ವಿಫಲವಾಗಿಲ್ಲ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಇದನ್ನು ಕಂಡು ಕಾಂಗ್ರೆಸ್‌ನವರು ಅನಿವಾರ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಉಳ್ಳಾಲ ಮತ್ತು ಕಾರವಾರ ಭಾಗದಲ್ಲಿ ಕಡಲು ಕೊರೆತ ಉಂಟಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಹಿಂದಿನ ಕಾಂಗ್ರೆಸ್ ಸರ್ಕಾರ ಕಲ್ಲು ಮಾತ್ರ ಹಾಕಿತ್ತು, ನಮ್ಮ ಸರ್ಕಾರ ಬಿಲ್ ನೀಡಬೇಕಾಗಿದೆ. ಸಮುದ್ರ ತೀರದ ಜನರ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಿದೆ. ಕೋಟ ಶ್ರೀನಿವಾಸ ಪೂಜಾರಿ, ಸಚಿವ