ಕರೊನಾ ಹಾವಳಿಗೆ ಒಂದು ವಾರ ರಜೆ ಘೋಷಿಸಿದ ರಾಜ್ಯದ ಏಕೈಕ ಮಹಿಳಾ ವಿವಿ!

akka pic
Published on

ವಿಜಯಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯ ಎನಿಸಿಕೊಂಡಿರುವ ಅಕ್ಕಮಹಾದೇವಿ ವಿವಿ ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಒಂದು ವಾರದ ಮಟ್ಟಿಗೆ ರಜೆ ಘೋಷಣೆ ಮಾಡಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಐದಕ್ಕಿಂತ ಹೆಚ್ಚು ಕೋವಿಡ್​ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅಂತಹ ಶಾಲೆ, ಕಾಲೇಜು, ವಿದ್ಯಾಲಯಗಳಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರದ ಮಾರ್ಗಸೂಚಿ ಇರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟ ಕಾರಣ, ಜನವರಿ 21 ರಿಂದ ಜ. 27ರವರೆಗೆ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಿಗೂ ರಜೆ ಘೋಷಣೆ ಮಾಡಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಒಂದು ವಾರದ ನಂತರ ವಿಶ್ವವಿದ್ಯಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ ಬಳಿಕ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net