ಕರೊನಾ ಇಫೆಕ್ಟ್, ಸಂತೆ ಜಾತ್ರೆ ರದ್ದತಿಗೆ ಆದೇಶ

Coronavirus 16 march 20
Published on

ಬೆಳಗಾವಿ: ಕರೊನಾ ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಒಂದು ವಾರದ ಅವಧಿಗೆ ಜಿಲ್ಲೆಯಾದ್ಯಂತ ಜರುಗುವ ಎಲ್ಲ ಸಂತೆ, ಜಾತ್ರೆಗಳನ್ನು ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಧಾರ್ಮಿಕ ಕೇಂದ್ರಗಳಲ್ಲಿ ದಿನನಿತ್ಯದ ಧಾರ್ಮಿಕ ವಿಧಿ-ವಿಧಾನಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ ಷರತ್ತಿನೊಂದಿಗೆ ವಿನಾಯಿತಿ ನೀಡಲಾಗಿದೆ. ಆದೇಶ ಜಾರಿಗೆ ಪೊಲೀಸ್ ಇಲಾಖೆ, ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net