

ಉಡುಪಿ: ಜಿಲ್ಲೆಯಲ್ಲಿ 11 ಮಂದಿಗೆ ಕರೊನಾ ಪಾಸಿಟಿವ್ ವರದಿ ದೃಢಪಟ್ಟಿದೆ. ಈ ಮೂಲಕ ಒಟ್ಟು ಪ್ರಕರಣ ಸಂಖ್ಯೆ 1088ಕ್ಕೆ ಏರಿಕೆಯಾಗಿದೆ. ಇದರಲ್ಲಿ ಇಬ್ಬರು ಕುವೈಟ್‌ನಿಂದ ಬಂದವರು. ಸೌದಿ, ದುಬೈನಿಂದ ತಲಾ ಇಬ್ಬರು ಬಂದಿದ್ದು, ಮಹಾರಾಷ್ಟ್ರದಿಂದ ಐದು ಮಂದಿ ಆಗಮಿಸಿದ್ದಾರೆ. ಇವರ ಪೈಕಿ ಇಬ್ಬರು ಸ್ಥಳೀಯರು. ಮಂಗಳವಾರ ಸ್ವೀಕರಿಸಿದ ವರದಿಯಲ್ಲಿ 47 ಮಂದಿಯ ವರದಿ ನೆಗೆಟಿವ್ ಬಂದಿದೆ.
202 ಮಂದಿಯ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 356 ಮಂದಿಯ ವರದಿ ಬರಲು ಬಾಕಿ ಇದೆ. 1088 ಪ್ರಕರಣದಲ್ಲಿ 978 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಂಗಳವಾರ 9 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 108 ಸಕ್ರೀಯ ಪ್ರಕರಣಗಳಿವೆ ಎಂದು ಡಿಸಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.