

ಹೊಳೆನರಸೀಪುರ: ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆ ಕರೊನಾ ಸೋಂಕಿತ ವೃದ್ಧ ಮೃತಪಟ್ಟಿದ್ದು, ಜನರು ಭಯಭೀತರಾಗಿದ್ದಾರೆ.
ಪಟ್ಟಣದ 12 ವಾರ್ಡ್‌ನ ಗಾಂಧಿನಗರ ಬಡಾವಣೆಯ ನಿವಾಸಿ ತಿಮ್ಮಯ್ಯ(88) ಮೃತ ವ್ಯಕ್ತಿ. ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಇವರು, ಡಯಾಲಿಸಿಸ್‌ಗೆ ಒಳಗಾಗುತ್ತಿದ್ದರು. ಜೂ.29 ರಂದು ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹಾಸನದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಪುರಸಭಾ ಸದಸ್ಯ ಕುಮಾರಸ್ವಾಮಿ ಸೇರಿ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.