ಕರೊನಾ ಮಹಾಮಾರಿಗೆ ಗಣಿ ಜಿಲ್ಲೆಯಲ್ಲಿ ನಾಲ್ಕನೇ ಬಲಿ, ಸಾವಿನ ಬಳಿಕ ವರದಿ ಪಾಸಿಟಿವ್

corona
Published on

ಬಳ್ಳಾರಿ: ಜಿಲ್ಲೆಯಲ್ಲಿ ಕರೊನಾ ಮಹಾಮಾರಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ನಗರದ ಕಪ್ಪಗಲ್ಲು ರಸ್ತೆ ಬಡಾವಣೆ ನಿವಾಸಿ 85 ವರ್ಷದ ಮಹಿಳೆ ಸೋಮವಾರ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಬಂದಿರುವ ಪ್ರಯೋಗಾಲಯ ವರದಿಯಲ್ಲಿ ಕರೊನಾ ದೃಢಪಟ್ಟಿದೆ. ಮಹಿಳೆ ಅನಾರೋಗ್ಯ ಹಿನ್ನೆಲೆಯಲ್ಲಿ ಜೂ.17ರಂದು ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿಡ್ನಿ ವೈಫಲ್ಯ, ನ್ಯೂಮೋನಿಯಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net