ಮುಂಗಾರು ಸಾಂಸ್ಕೃತಿಕ ಹಬ್ಬ ರದ್ದು : ಮಾಜಿ ಶಾಸಕ ಪಾಪಾರೆಡ್ಡಿ ಮಾಹಿತಿ

Ex-MLA Papareddy Raichur
Published on

ರಾಯಚೂರು: ಕರೊನಾ ಹಿನ್ನೆಲೆಯಲ್ಲಿ ಮುನ್ನೂರು ಕಾಪು ಸಮಾಜದಿಂದ ಪ್ರತಿ ವರ್ಷ ಆಚರಿಸಲಾಗುತ್ತಿದ್ದ ಮುಂಗಾರು ಸಾಂಸ್ಕೃತಿಕ ಹಬ್ಬ ಆಚರಣೆ ರದ್ದುಗೊಳಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಮುಂಗಾರು ಸಾಂಸ್ಕೃತಿಕ ಹಬ್ಬ ಆಚರಣೆ ಸಮಿತಿ ಅಧ್ಯಕ್ಷ ಎ.ಪಾಪಾರೆಡ್ಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, 19 ವರ್ಷಗಳಿಂದ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಾ ಬರಲಾಗಿದೆ. ಈ ಬಾರಿ ಜೂ.4 ರಿಂದ 6ರವರೆಗೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಲು ತೆಲಂಗಾಣ, ಆಂಧ್ರಪ್ರದೇಶ ಸೇರಿ ರಾಜ್ಯವ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸುತ್ತಿದ್ದರು. ಎತ್ತುಗಳಿಂದ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವುದರಿಂದ ಕರೊನಾ ಸೋಂಕು ಹರಡುವ ಭೀತಿಯಿಂದ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.

ಕರೊನಾ ಸೋಂಕಿನಿಂದ ಜನರು ಸಂಕಷ್ಟ ಎದುರಿಸುತ್ತಿರುವಾಗ ಕಾರ್ಯಕ್ರಮ ನಡೆಸುವುದು ಸೂಕ್ತವಲ್ಲ ಎನ್ನುವ ಅಭಿಪ್ರಾಯಕ್ಕೆ ಬರಲಾಗಿದೆ. ಮುನ್ನೂರು ಕಾಪು ಸಮಾಜದಿಂದ ಸಂಕಷ್ಟದಲ್ಲಿರುವ ಜನರು ಹಾಗೂ ಆಟೋ ಚಾಲಕರಿಗೆ ಆಹಾರಧಾನ್ಯಗಳ ಕಿಟ್ ವಿತರಣೆ ಮಾಡಲಾಗಿದೆ ಎಂದು ಎ.ಪಾಪಾರೆಡ್ಡಿ ತಿಳಿಸಿದರು.

ಮುನ್ನೂರು ಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಪದಾಧಿಕಾರಿಗಳಾದ ಜಿ.ಬಸವರಾಜ ರೆಡ್ಡಿ, ಪುಂಡ್ಲ ನರಸರೆಡ್ಡಿ, ಯು.ದೊಡ್ಡಮಲ್ಲೇಶ, ಎನ್.ಶ್ರೀನಿವಾಸರೆಡ್ಡಿ, ಎಸ್.ವೆಂಕಟರೆಡ್ಡಿ, ಪಿ.ನರಸರೆಡ್ಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net