ದ.ಕ. ಕೋವಿಡ್ ಮೃತರ ಸಂಖ್ಯೆ 600ಕ್ಕೆ

Corona
Published on

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕಿಗೆ ಒಳಗಾಗಿ ಶನಿವಾರ ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಇಲ್ಲಿ ಈ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 600 ತಲುಪಿದೆ.

ಹೊಸ 316 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ದಾಖಲಾದ ಒಟ್ಟು ಪಾಸಿಟಿವ್ ಪ್ರಕರಣಗಳು 26,264. ಒಟ್ಟು 607 ಮಂದಿ ಪೂರ್ಣ ಗುಣವಾಗಿದ್ದು, ಕರೊನಾ ಮುಕ್ತರಾದವರ ಸಂಖ್ಯೆ 21,461. ಒಟ್ಟು ಸಕ್ರಿಯ ಪ್ರಕರಣ 4,203.

ಇಲ್ಲಿವರೆಗೆ ಜಿಲ್ಲೆಯಲ್ಲಿ 6,221 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, 7,70,835 ರೂ. ದಂಡ ವಿಧಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಶನಿವಾರ 239 ಮಂದಿಗೆ ಪಾಸಿಟಿವ್ ವರದಿಯಾಗಿದೆ. ಅನಾರೋಗ್ಯಕ್ಕೀಡಾಗಿ ಮೃತಪಟ್ಟ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 164ಕ್ಕೆ, ಒಟ್ಟು ಸೋಂಕಿತರ ಸಂಖ್ಯೆ 19,224ಕ್ಕೆೆ ಏರಿಕೆಯಾಗಿದೆ. ಶನಿವಾರ 224 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1952 ಸಕ್ರಿಯ ಪ್ರಕರಣಗಳಿವೆ.

ಕಾಸರಗೋಡು ಜಿಲ್ಲೆಯ 539 ಮಂದಿ ಸೇರಿ ರಾಜ್ಯದಲ್ಲಿ ಶನಿವಾರ 11755 ಮಂದಿಗೆ ಕೋವಿಡ್- 19 ಬಾಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net