ಹಾಲಿನ ಮೇಲಿಲ್ಲ ಕರೊನಾ ಕರಿನೆರಳು

ಹಾಲು
Published on

ಬೆಂಗಳೂರು: ಕರೊನಾ ವೈರಾಣುವಿನಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಯಾವುದೇ ನಷ್ಟವಾಗಿಲ್ಲ. ವದಂತಿಗಳಿಗೆ ಜನರು ಕಿವಿಗೊಡಬಾರದು. ಈ ಬಗ್ಗೆ ಜಿಲ್ಲಾ ಒಕ್ಕೂಟಗಳು ಅರಿವು ಮೂಡಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಕೆಎಂಎಫ್ ಆಡಳಿತ ಮಂಡಳಿ ಹಾಗೂ 14 ಜಿಲ್ಲಾ ಒಕ್ಕೂಟಗಳ ಅಧ್ಯಕ್ಷರ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೆಎಂಎಫ್ ಮಾರುಕಟ್ಟೆ ವಿಸ್ತರಿಸುವ ಮಹತ್ವಾಕಾಂಕ್ಷೆ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಹಾಲು ಒಕ್ಕೂಟಗಳು ಶ್ರಮಿಸಬೇಕು ಎಂದರು. ನಂದಿನಿ ಹಾಲಿನ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಅಧಿಕಾರಿಗಳು ರೈತರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವ ಮೂಲಕ ಮಾರುಕಟ್ಟೆ ವಿಸ್ತರಿಸಬೇಕು ಎಂದು ಸೂಚಿಸಿದರು. ಕೋಲಾರ ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷ ಕೆ.ವೈ. ನಂಜೇಗೌಡ, ಬೆಳಗಾವಿ ಹಾಲು ಒಕ್ಕೂಟ ಅಧ್ಯಕ್ಷ ವಿವೇಕರಾವ ಪಾಟೀಲ, ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net