ಕರೊನಾ ಕಡಿವಾಣಕ್ಕೆ ನಿರಂತರ ಸೇವೆ

17SDT01-Web
ಸವದತ್ತಿ ಪಟ್ಟಣದ ಮಾಮನಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಕರೊನಾ ಸೇವಾ ಅಭಿಯಾನದ ಅವಲೋಕನ ಸಭೆಯಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿದರು. ಮಾಜಿ ಶಾಸಕ ಸಂಜಯ ಪಾಟೀಲ, ರಾಜು ಚಿಕ್ಕನಗೌಡರ, ಮಹೇಶ ಮೋಹಿತೆ, ಗುರುಪಾದ ಕಳ್ಳಿ ಇತರರು ಇದ್ದರು.
Published on

ಸವದತ್ತಿ: ತಾಲೂಕಿನಲ್ಲಿ ಕರೊನಾ ಸೋಂಕು ತಡೆಗೆ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ತಾಲೂಕು ಆಡಳಿತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿದರು.

ಪಟ್ಟಣದ ಮಾಮನಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಕರೊನಾ ಸೇವಾ ಅಭಿಯಾನದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಈವರೆಗೆ ಕರೊನಾ ವೈರಸ್ ಪ್ರಕರಣ ದಾಖಲಾಗಿಲ್ಲ. ಇದಕ್ಕೆ ಮೇಲಧಿಕಾರಿಗಳ ಶ್ರಮವಿದ್ದು, ಕಾರ್ಯಕರ್ತರು ಸಹಕಾರ ನೀಡಬೇಕು ಎಂದರು. ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ಕರೊನಾ ಸೋಂಕು ತಡೆಗಟ್ಟುವಲ್ಲಿ ತಾಲೂಕು ಆಡಳಿತದ ಜತೆಗೆ ಸತತವಾಗಿ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರೂ ನಿಷ್ಠೆಯಿಂದ ಶ್ರಮಿಸುತ್ತಿದ್ದಾರೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಮಹೇಶ ಮೋಹಿತೆ, ಗುರುಪಾದ ಕಳ್ಳಿ, ಈರಣ್ಣ ಚಂದರಗಿ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net