ಗಂಗಾವತಿಯ ಕೋವಿಡ್ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಸೋಂಕಿತೆ!

gangavati
Published on

ಕೊಪ್ಪಳ: ಕರೊನಾ ಸೋಂಕಿಗೆ ತುತ್ತಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬಳು ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ಗಂಗಾವತಿಯ ಎಂಸಿಎಚ್​ ಕೋವಿಡ್ 19 ಆಸ್ಪತ್ರೆಯಲ್ಲಿ ಗದಗ ಪಟ್ಟಣದ ರೋಹಿಣಿ ಕಲ್ಮೇಶ್ವರಯ್ಯ ಕಲ್ಮಠ (48) ಕರೊನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು. ಸೋಂಕಿಗೆ ತುತ್ತಾದ ನಂತರ ಆಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ಗಂಗಾವತಿ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net