

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ಧೃಡಪಟ್ಟಿದೆ.
ಕಾಲೇಜಿನ 100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕರೊನಾ ಟೆಸ್ಟ್ನಲ್ಲಿ ಪಾಸಿಟಿವ್ ಎಂದು ವರದಿ ಬಂದಿದ್ದು, ಈ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಇದನ್ನೂ ಓದಿರಿ ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?
ಕರೊನಾ ಸೋಂಕು ಧೃಡಪಟ್ಟ 48 ವಿದ್ಯಾರ್ಥಿಗಳು ಕೇರಳ ಮೂಲದವರು. ಶಿಕ್ಷಣಕ್ಕಾಗಿ ಇಲ್ಲಿಗೆ ಬಂದಿದ್ದ ಅವರು ಕಾಲೇಜಿನ ಹಾಸ್ಟೆಲ್ನಲ್ಲೇ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್ ಅನ್ನು ಸೀಲ್ಡೌನ್ ಮಾಡಲಾಗಿದೆ.