ಎಚ್​.ಡಿ. ರೇವಣ್ಣಗೂ ಕರೊನಾ ಪಾಸಿಟಿವ್​

City 1 HD Revanna
Published on

ಬೆಂಗಳೂರು: ಮಾಜಿ ಸಚಿವ ಎಚ್​.ಡಿ. ರೇವಣ್ಣ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಶ್ರೀರಾಮುಲು ಅವರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ಜೆಡಿಎಸ್​ ಪಕ್ಷದ ನಾಯಕರೂ ಆದ ಮಾಜಿ ಸಚಿವ ಎಚ್​.ಡಿ. ರೇವಣ್ಣ ಅವರಿಗೆ ಕರೊನಾ ಸೋಂಕು ತಗುಲಿದೆ. ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ' ಎಂದು ಹಾರೈಸಿದ್ದಾರೆ.

ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇದಿನೆ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗಷ್ಟೇ ಸಿಎಂ ಬಿ.ಎಸ್​. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮತ್ತೊಬ್ಬ ಹಿರಿಯ ರಾಜಕಾರಣಿ ರೇವಣ್ಣಗೆ ಸೋಂಕು ತಗುಲಿದ್ದು, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net