ಒಂದೇ ಕಾಲೇಜಿನ 10 ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ಪತ್ತೆ!

CORONA
Published on

ಬೆಂಗಳೂರು: ಕರೊನಾ ಸೋಂಕಿನ ವ್ಯಾಪ್ತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯದ ಕೆಲ ನರ್ಸಿಂಗ್​ ಕಾಲೇಜಿನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಇತ್ತೀಚಿಗಷ್ಟೇ ಕರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ರಾಜ್ಯ ರಾಜಧಾನಿಗೂ ಕೇರಳ ವೈರಸ್​ ಕಂಟಕವಾಗ್ತಿದೆ.

ಬೆಂಗಳೂರಿನ ಯಲಹಂಕದಲ್ಲಿರುವ ಸಂಭ್ರಮ್ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ಇಂದು ಧೃಡಪಟ್ಟಿದೆ. ಈ ಪೈಕಿ ಮೂವರು ಕೇರಳ ಮೂಲದವರು. ಕೇರಳ ವಿದ್ಯಾರ್ಥಿಗಳಿಂದ ಸ್ಥಳೀಯ ವಿದ್ಯಾರ್ಥಿಗಳಿಗೂ ಸೋಂಕು ಹರಡಿದೆ. ಇದನ್ನೂ ಓದಿರಿ ಮಗುವಿಗೆ ಹಾಲುಣಿಸುತ್ತಿದ್ದ ಪತ್ನಿಯ ಎದೆಭಾಗಕ್ಕೆ ಬ್ಲೇಡ್ ಹಾಕಿದ ಪತಿ! ಕಾರಣ ಕೇಳಿದ್ರೆ ಸಿಟ್ಟಿಗೇಳ್ತೀರಿ

ಸಂಭ್ರಮ್ ಕಾಲೇಜಿನಲ್ಲಿ 150 ವಿದ್ಯಾರ್ಥಿಗಳಿದ್ದು, ಸದ್ಯ ಕಾಲೇಜಿಗೆ ಬಿಬಿಎಂಪಿ ವತಿಯಿಂದ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. 14 ದಿನ ಕಾಲೇಜು ಬಂದ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net