ಉಡುಪಿ ಜಿಲ್ಲಾ ಪಂಚಾಯಿತಿ ಸಿಬ್ಬಂದಿಗೆ ಕರೊನಾ

corona
Published on

ಉಡುಪಿ: ಜಿಲ್ಲೆಯಲ್ಲಿ ಕರೊನಾ ಆರ್ಭಟ ಮುಂದುವರಿದ್ದು, ಪೊಲೀಸ್ ಇಲಾಖೆ ನಂತರ ಇದೀಗ ಕರೊನಾ ಸವಾರಿ ಜಿಲ್ಲಾ ಪಂಚಾಯಿತಿ ಕಡೆಗೆ ತಿರುಗಿದೆ. ಸಾಯಂಕಾಲ ವಿಡಿಯೋ ಸಂದೇಶದಲ್ಲಿ, ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಹಾಗೂ ಹೆಡ್ ಕಾನ್‌ಸ್ಟೆಬಲ್ ಒಬ್ಬರಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಜಿ.ಪಂ. ಸಿಬ್ಬಂದಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಗಂಟಲ ದ್ರವ ಪರೀಕ್ಷೆ ನಡೆಸಿದಾಗ ಅವರಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ಸೋಂಕು ತಗುಲಿದ ಮೂಲವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಡಿಸಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net