ಎರಡನೇ ಅಲೆ ತಡೆಗೆ ಸಹಕರಿಸಲು ಜಿಲ್ಲಾಧಿಕಾರಿ ಮನವಿ

Ballari DC Pavankumar Malapati
ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ.
Published on

ಬಳ್ಳಾರಿ: ಕರೊನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೋಂಕು ನಿಯಂತ್ರಣ ಮತ್ತು ನಗರದ ವಿವಿಧ ವಾರ್ಡ್‌ಗಳಲ್ಲಿ 18 ರಿಂದ 45 ವಯಸ್ಸಿನವರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಕೈಗೊಳ್ಳುತ್ತಿದ್ದ ಇದಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಸ್ವಯಂ ಸೇವಾ ಸಂಘ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಿದರು.

ಕಳೆದ ವರ್ಷದ ಲಾಕ್‌ಡೌನ್ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಜಿಲ್ಲಾಡಳಿತ ವಹಿಸಿದ್ದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಕ್ಕೆ ಸಂಘ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಜಿಪಂ ಸಿಇಒ ಕೆ.ಆರ್. ನಂದಿನಿ, ಸಹಾಯಕ ಆಯುಕ್ತರಾದ ರಮೇಶ್ ಕೋನರೆಡ್ಡಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎ. ಷಕೀಬ್, ನಗರದ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಮತ್ತು ಸ್ವಯಂ ಸೇವಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net