ಗರ್ಭಿಣಿಗೆ ಕರೊನಾ ಶಂಕೆ

Coronavirus 16 march 20
Published on

ಉಡುಪಿ: ಗರ್ಭಿಣಿಯಲ್ಲಿ ಶಂಕಿತ ಕರೊನ ವೈರಸ್ ಕೊವಿಡ್-19 ಲಕ್ಷಣ ಕಾಣಿಸಿಕೊಂಡಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆ ಐಸೊಲೇಶನ್ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಮಾ.13 ರಂದು ದುಬೈನಿಂದ ಬಂದಿದ್ದ 26 ವರ್ಷದ ಮಹಿಳೆ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಸಾಯಂಕಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಗಂಟಲಿನ ದ್ರವ, ರಕ್ತ ಮಾದರಿಯನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ವರದಿ ನಿರೀಕ್ಷೆಯಲ್ಲಿದ್ದೇವೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ 6, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ 4 ಶಂಕಿತ ಪ್ರಕರಣ ಸೇರಿದಂತೆ ಈವರೆಗೆ ಒಟ್ಟು 10 ಪ್ರಕರಣಗಳ ವರದಿ ನೆಗೆಟಿವ್ ಬಂದಿದೆ. ಕರೊನಾ ಮುಂಜಾಗ್ರತಾ ಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು, ತಾಲೂಕು ಅಧಿಕಾರಿಗಳು, ವೈದ್ಯಾಧಿಕಾರಿಗಳ ಸಭೆ ನಡೆಸಿದ್ದಾರೆ. ಆಶಾ ಕಾರ್ಯಕರ್ತೆಯರು, ರೋಗ್ಯ ಸಹಾಯಕಿಯರು ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನಗರದಲ್ಲಿ ಚಿತ್ರ ಮಂದಿರ, ಮಾಲ್, ದಿನವಾಹಿ ಬೃಹತ್ ರಿಟೇಲ್ ಶಾಪ್‌ಗಳ ಬಂದ್ ಯಥಾಸ್ಥಿತಿ ಮುಂದುವರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net