ಉಡುಪಿ ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆ

corona
Published on

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 135 ಮಂದಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ.

70 ಪುರುಷರು, 55 ಮಹಿಳೆಯರು, 10 ಮಕ್ಕಳು ಸೋಂಕಿತರಲ್ಲಿದ್ದು, ಇದರಲ್ಲಿ ಬ್ರಹ್ಮಾವರದ 22, ಬೈಂದೂರು 41, ಕುಂದಾಪುರ 11, ಕಾರ್ಕಳ 23, ಕಾಪು 10, ಉಡುಪಿಯ 28 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಕರೊನಾ ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.

ಭಾನುವಾರ 349 ಮಂದಿಯ ವರದಿ ನೆಗೆಟಿವ್ ಬಂದಿದೆ. ಸೋಂಕಿತರ ಸಂಪರ್ಕವಿದ್ದ 238 ಮಂದಿ ಸೇರಿದಂತೆ ಒಟ್ಟು 455 ಮಂದಿಯ ಗಂಟಲದ್ರವ ಮಾದರಿ ಸಂಗ್ರಹಿಸಲಾಗಿದೆ. 42 ಮಂದಿ ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 98 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 1628 ಮಂದಿ ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. 584 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮೃತಪಟ್ಟ ವೃದ್ಧನಿಗೆ ಪಾಸಿಟಿವ್

ಗಂಗೊಳ್ಳಿ: ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರಿಗೆ ಕರೊನಾ ದೃಢಪಟ್ಟಿದೆ.

ಗುಜ್ಜಾಡಿ ಗ್ರಾಮದ ಮಂಕಿ ನಿವಾಸಿ 80 ವರ್ಷ ಪ್ರಾಯದ ವ್ಯಕ್ತಿ ಹೃದಯ ಸಂಬಂಧಿ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಮೂರು ದಿನ ಹಿಂದೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದರು.

ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು. ಸೋಂಕು ತಗುಲಿದ ಬಗ್ಗೆ ಮಾಹಿತಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಕಲೆ ಹಾಕುತ್ತಿದ್ದು, ಈವರೆಗೆ ಯಾವುದೇ ಖಚಿತ ಮಾಹಿತಿ ದೊರೆತಿಲ್ಲ. ಗುಜ್ಜಾಡಿ ಮಂಕಿಯಲ್ಲಿರುವ ಅವರ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net