

ಬೆಂಗಳೂರು: ಕರೊನಾ ವ್ಯಾಕ್ಸಿನ್ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಚಾಲನೆ ನೀಡಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ವೇದಿಕೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಇದು. ಆತ್ಮನಿರ್ಭರ್ ಭಾರತ ನಿಧಿ ನೆರವಿನಡಿ ಆಯೋಜಿಸಲಾಗಿದೆ. ವೈದೇಹಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕರೊನಾ ವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ನಡೆಯಲಿದೆ.
ಈ ಸಂದರ್ಭದಲ್ಲಿ ಸಚಿವ ಡಾ.ಸುಧಾಕರ್. ವೈದೇಹಿ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ.ರಾಜೇಶ್ ನಾಯ್ಡು ಉಪಸ್ಥಿತರಿದ್ದರು. ಮುಖ್ಯಮಂತ್ರಿಯವ ಭಾಷಣ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ..