ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್ ತಳವಾರ್ ಸಲಹೆ

160420 Kushtagi Corona Awarness Programmee
Published on

ಕುಷ್ಟಗಿ: ಕರೊನಾ ವೈರಾಣುವಿನ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ವೈದ್ಯರು, ಪೊಲೀಸರು ಹಾಗೂ ಪೌರ ಕಾರ್ಮಿಕರು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಪಟ್ಟಣದ ಜೆಎಂಎಫ್‌ಸಿ ಕೋರ್ಟ್‌ನ ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್ ತಳವಾರ್ ಸಲಹೆ ನೀಡಿದರು.

ಕರೊನಾ ತಡೆಗೆ ಕ್ರಮ ಕೈಗೊಳ್ಳುವ ಸಂಬಂಧ ಪುರಸಭೆ ಗುರುವಾರ ಆರಂಭಿಸಿದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮಾಸ್ಕ್ ಧರಿಸಿಯೇ ಹೊರಬರಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಉದಾಸೀನ ತೋರಬಾರದು ಎಂದು ಪೌರ ಕಾರ್ಮಿಕರಿಗೆ ಸಲಹೆ ನೀಡಿದರು. ಪೌರ ಕಾರ್ಮಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಿಸಿ ಅವರ ಯೋಗಕ್ಷೇಮ ವಿಚಾರಿಸಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಫಿಕ್ ಅಹ್ಮದ್, ಪುರಸಭೆಯ ಮುಖ್ಯಾಧಿಕಾರಿ ಅಶೋಕ ಪಾಟೀಲ್, ವ್ಯವಸ್ಥಾಪಕ ಪ್ರಹ್ಲಾದ್ ಜೋಶಿ, ಕೋರ್ಟ್‌ನ ಶಿರಸ್ತೇದಾರ್ ಎನ್.ಲೋಕೇಶ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net