ಕರೊನಾಕ್ಕೆ ಇನ್ನೊಂದು ಬಲಿ-ಐದಕ್ಕೇರಿತು ಮೃತರ ಸಂಖ್ಯೆ: ರಾಜ್ಯದಲ್ಲಿ 181 ಮಂದಿಗೆ ಸೋಂಕು

Corona 1
Published on

ಬೆಂಗಳೂರು: ಕರ್ನಾಟಕದಲ್ಲಿ ಕರೊನಾ ಸೋಂಕಿಗೆ ಕಲಬುರಗಿಯ 65 ವರ್ಷದ ವ್ಯಕ್ತಿಯೊಬ್ಬರು ಇಂದು ಬಲಿಯಾಗಿದ್ದಾರೆ. ನಾಲ್ಕು ವಾರಗಳ ಹಿಂದೆ 76 ವರ್ಷದ ಕಲಬುರಗಿಯ ವೃದ್ಧರೊಬ್ಬರು ಕರೊನಾದಿಂದಾಗಿ ಮೃತಪಟ್ಟಿದ್ದರು. ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 5 ಕ್ಕೆ ಏರಿದೆ.

ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ ಆರು ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸೋಂಕಿತರ ಸಂಖ್ಯೆ 181ಕ್ಕೆ ಏರಿದೆ. ಒಟ್ಟು 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ. ನಾಳೆ (ಏ.9)ರಂದು ನಡೆಸಲು ಉದ್ದೇಶಿಸಲಾಗಿದ್ದ ಶಾಬ್‌-ಎ-ಬರಾತ್‌ ಸಾರ್ವಜನಿಕರ ಭೇಟಿಯನ್ನು ರದ್ದುಗೊಳಿಸಲಾಗಿದೆ.

ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net