ಪ್ರಧಾನಮಂತ್ರಿ ಪರಿಹಾರ ನಿಧಿಗೆ 1.01 ಕೋಟಿ ದೇಣಿಗೆ

Prabhakar-Kore
Published on

ಬೆಳಗಾವಿ: ಕರೊನಾ ವೈರಸ್ ಸಂತ್ರಸ್ತರಿಗಾಗಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ ರಾಜ್ಯಸಭಾ ಸದಸ್ಯ, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ರಾಜ್ಯಸಭಾ ಸದಸ್ಯರ ನಿಧಿಯಿಂದ ಒಂದು ಕೋಟಿ ರೂ. ಹಾಗೂ ತಮ್ಮ ವೇತನದಿಂದ 1 ಲಕ್ಷ ರೂ. ದೇಣಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಶಾಸಕರು, ಸಂಸದರು ಹಾಗೂ ಬಿಜೆಪಿಯ ಹಿರಿಯ ಮುಖಂಡರಿಗೆ ಹಾಗೂ ದೇಶದ ಜನತೆಗೆ ಮಹಾಮಾರಿ ಕರೊನಾ ವೈರಸ್ ವಿರುದ್ಧ ಸರ್ಕಾರ ರೂಪಿಸುತ್ತಿರುವ ಯೋಜನೆಗೆ ಧನಸಹಾಯ ನೀಡುವಂತೆ ಇತ್ತೀಚೆಗೆ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ಮನವಿ ಮಾಡಿದ್ದರು. ಅದಕ್ಕೆ ಆದಾಯ ತೆರಿಗೆ ಇಲಾಖೆಯ 80ಜಿ ಸೆಕ್ಷನ್ ಅಡಿಯಲ್ಲಿ ತೆರಿಗೆ ವಿನಾಯಿತಿಯೂ ದೊರೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net