ಸಂತ್ರಸ್ತರಿಗಾಗಿ 1.01 ಕೋಟಿ ರೂಪಾಯಿ

00
Published on

ಚಿಕ್ಕೋಡಿ: ಸಂಸದರ ನಿಧಿಯ 1 ಕೋಟಿ ರೂ.ಹಾಗೂ 1 ಲಕ್ಷ ರೂ. ತಮ್ಮ ಸಂಬಳದ ಹಣವನ್ನು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನೀಡಿದ್ದೇನೆ ಎಂದು ಚಿಕ್ಕೋಡಿ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಈ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಕರೊನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಹಾಗಾಗಿ ದೇಶ ಸಂಕಷ್ಟ ಅನುಭವಿಸುತ್ತಿರುವಾಗ ನಾವೆಲ್ಲರೂ ಸರ್ಕಾರಕ್ಕೆ ಸಹಕಾರ ನೀಡಬೇಕಾಗಿದೆ.

ಸಾರ್ವಜನಿಕರು ಪ್ರಧಾನಿ ಕರೆಗೆ ಸ್ಪಂದಿಸಿ ತಮಗಾದಷ್ಟು ಪರಿಹಾರ ನಿಧಿಗೆ ಸಹಾಯ ಮಾಡಬೇಕು ಎಂದು ಸಂಸದ ಜೊಲ್ಲೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net