

ಬೆಂಗಳೂರು : ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಇಂದು ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದಿನಸಿ ಕಿಟ್ ವಿತರಣೆ ಮತ್ತು ಕರೊನಾ ಸೇನಾನಿಗಳ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ 19 ಎರಡನೇ ಅಲೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಿಂದುಳಿದ ಕುಟುಂಬಗಳಿಗೆ ದಿನಸಿ ಕಿಟ್ಗಳನ್ನು ವಿತರಿಸಿದರು.
ಕರೊನಾ ಸೇನಾನಿಗಳಾದ ವೈದ್ಯರು ಮತ್ತು ಪೊಲೀಸ್ ಸಿಬ್ಬಂದಿಗಳನ್ನು ಕೂರಿಸಿ, ತಲೆಯ ಮೇಲೆ ಹೂವಿನ ದಳಗಳನ್ನು ಹಾಕಿ ಸನ್ಮಾನಿಸಲಾಯಿತು. ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮಾಜಿ ನಗರಪಾಲಿಕೆ ಸದಸ್ಯ ಸಿ.ಕೆ.ರಾಮಮೂರ್ತಿ ಮತ್ತು ಇತರ ಗಣ್ಯರು ಭಾಗವಹಿಸಿದರು.