

ಬಸವನಬಾಗೇವಾಡಿ: ಪಟ್ಟಣದ ಶ್ರೀ ಉತ್ತರಾದಿಮಠದಲ್ಲಿ ರಾಘವೇಂದ್ರ ಸ್ವಾಮಿಗಳ 404ನೇ ಪಟ್ಟಾಭಿಷೇಕ ಮಹೋತ್ಸವವನ್ನು ಶನಿವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಬೆಳಗ್ಗೆ 8 ಗಂಟೆಗೆ ಅಷ್ಟೋತ್ತರ, ರಾಯರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಶ್ರೀ ಮಠದ ಪ್ರಾಧಿಕಾರದಲ್ಲಿ ರಾಯರ ಪಾದುಕೆಗಳಿಗೆ ಪುಷ್ಪಾರ್ಚನೆ, ಪಲ್ಲಕ್ಕಿ ಸೇವೆ ನಡೆಯಿತು.
ಅರ್ಚಕ ಶ್ರೀ ವಾದಿರಾಜ ಯಜುರ್ವೇದಿ ಮಾತನಾಡಿ, ಆಸ್ತಿಕ ಪರಂಪರೆ ರಕ್ಷಿಸುವ ಮೂಲಕ ಧರ್ಮ ಜಾಗೃತಿ ಮೂಡಿಸುವಲ್ಲಿ ರಾಯರ ಪಾತ್ರ ಹಿರಿದಾದುದು ಎಂದರು.
ಕಾರ್ಯಕ್ರಮದಲ್ಲಿ ವಸಂತರಾವ ಕುಲಕರ್ಣಿ ಹಾಗೂ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.