22ರಂದು ಪಟ್ಟಾಭಿಷೇಕ ಮಹೋತ್ಸವ

20 06 2025_BNG_RURAL_PAGE_2
ನಗರೂರು ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಮಾತನಾಡಿದರು. ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಜೆಡಿಎಸ್​ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್​, ವಕೀಲ ರಂಗನಾಥ್​ ಇದ್ದರು.
Published on

ನೆಲಮಂಗಲ: ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಪಟ್ಟಾಭಿಷೇಕ ಮಹೋತ್ಸವ ಹಾಗೂ ನೂತನ ಜ್ಞಾನ ಮಂದಿರ ಕಟ್ಟಡ, ಟ್ರಸ್ಟ್​ ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಜೂ.22ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ತಿಳಿಸಿದರು.

ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದ ಶ್ರೀ ೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 4ನೇ ಪಟ್ಟಾಭಿಷೇಕ ಸಮಾರಂಭ ಜತೆಗೆ ಶ್ರೀ ಮಠದಿಂದ ನೂತನ ಜ್ಞಾನ ಮಂದಿರ ಕಟ್ಟಡ ಸೇರಿ ಟ್ರಸ್ಟ್​ ಕಚೇರಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.

ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜ್ಞಾನ ಮಂದಿರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಟ್ರಸ್ಟ್​ ಕಚೇರಿಯನ್ನು ಶಾಸಕ ಎಸ್​.ಆರ್​.ವಿಶ್ವನಾಥ್​ ಉದ್ಘಾಟಿಸಲಿದ್ದಾರೆ. ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ಮಠದ ಶ್ರೀ ಜಯೇಂದ್ರಪುರಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ರಾಜ್ಯದ ಹಲವು ಮಠದ ಶ್ರೀಗಳು ಆಗಮಿಸಲಿದ್ದಾರೆಂದು ತಿಳಿಸಿದರು.

ವಿವಿಧ ಕಾರ್ಯಕ್ರಮ : ವಿವಿಧ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಉಚಿತ ಅರೋಗ್ಯ ಶಿಬಿರ, ಗಾಣಿಗ ಸಮಾಜದ ವಧು&ವರರ ಅನ್ವೇಷಣೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸೇರಿ ಬೃಹತ್​ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗಳು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net