

ಬೆಂಗಳೂರು: ಮಾರಕ ಕರೊನಾ ವೈರಸ್ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ 6 ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಲಾಕ್ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ.
ಬೆಂಗಳೂರು, ಕಲಬುರಗಿ, ಕೊಡಗು, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ಇದರ ಅನ್ವಯ ಮಾರ್ಚ್ 31ರವರೆಗೆ ಆರು ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳು ಬಿಟ್ಟು ಉಳಿದೆಲ್ಲವು ಸ್ತಬ್ಧವಾಗಲಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದೆ.
ಮಾ. 31ರ ವರೆಗೆ 6 ಜಿಲ್ಲೆಗಳಲ್ಲಿ ಬಾರ್ ಅ್ಯಂಡ್ ರೆಸ್ಟೋರೆಂಟ್, ಸಾರಿಗೆ, ಮೆಟ್ರೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಆಸ್ಪತ್ರೆ, ಔಷಧಾಲಯ, ಹಾಲ, ಹೂ, ಹಣ್ಣು, ಪೇಪರ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಎಂದಿನಂತೆ ಲಭ್ಯವಾಗಲಿದೆ.
ಧವಳಗಿರಿ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಜತೆ ಮುಖ್ಯಮಂತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಈ ಸಂಬಂಧ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರ ಸೂಚನೆಯಂತೆ ಲಾಕ್ಡೌನ್ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್)