ರಾಜ್ಯದಲ್ಲಿ ಏರುತ್ತಲೇ ಇದೆ ಸೋಂಕಿನ ಸಂಖ್ಯೆ: ಇಂದು ಬೆಳಗ್ಗೆಯಿಂದ ಆರು ಹೊಸ ಪ್ರಕರಣ

Corona
Published on

ಬೆಂಗಳೂರು: ಇಂದು ಬೆಳಗ್ಗೆಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಆರು ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 197ಕ್ಕೆ ಏರಿದೆ. 30 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಆರು ಸಾವು ಸಂಭವಿಸಿದೆ.

ಬೆಂಗಳೂರಿನಲ್ಲಿ ಇಲ್ಲಿಯವರೆಗಿನ ಸೋಂಕಿತರ ಸಂಖ್ಯೆ 68 ಇದ್ದರೆ, ಮೈಸೂರಿನಲ್ಲಿ 37, ದಕ್ಷಿಣ ಕನ್ನಡದಲ್ಲಿ 12, ಬೀದರ್‌ ಮತ್ತು ಬೆಳಗಾವಿಯಲ್ಲಿ ತಲಾ 10, ಉತ್ತರ ಕನ್ನಡ, ಕ್ಕಬಳ್ಳಾಪುರ ಮತ್ತು ಕಲಬುರ್ಗಿಯಲ್ಲಿ ತಲಾ 9, ಬಾಗಲಕೋಟೆಯಲ್ಲಿ 8, ಬಳ್ಳಾರಿ 6, ಮಂಡ್ಯ 5, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಮತ್ತು ಉಡುಪಿಯಲ್ಲಿ ತಲಾ 3, ಧಾರವಾಡ 2, ಗದಗ, ಕೊಡಗು ಮತ್ತು ತುಮಕೂರು ತಲಾ ಓರ್ವ ಸೋಂಕಿತರು ಇದುವರೆಗೆ ಮೃತಪಟ್ಟಿದ್ದಾರೆ.

ಕರೊನಾ ವೈರಸ್‌ ಸೋಂಕು ಪರೀಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸರ್ಕಾರ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ವಿದ್ಯಾಲಯಗಳಿಗೆ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು arvind.nccs@gmail.com ಮತ್ತು jitunarayan@gmail.com ಇಲ್ಲಿಂದ ಪಡೆದುಕೊಳ್ಳಬಹುದು.

ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.

ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net