

ಬೆಂಗಳೂರು: ಕರೊನಾವೈರಸ್ ಆತಂಕ ಸಚಿವರನ್ನು ಕಾಡಲಾರಂಭಿಸಿದ್ದು, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ರಾಮನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವತ್ಥನಾರಾಯಣ, ಖಾಸಗಿ ವಾಹಿನಿ ಕ್ಯಾಮರಾಮನ್ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ಈಗ ಆ ಕ್ಯಾಮರಾಮೆನ್ಗೆ ಪಾಸಿಟಿವ್ ಬಂದಿರುವುದರಿಂದ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಈಗಾಗಲೆ ಒಮ್ಮೆ ಕರೊನಾ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ಬಂದಿದೆ. ಆದರೂ ಮತ್ತೊಮ್ಮೆ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕರೊನಾ ಪರೀಕ್ಷೆಗೆ ಒಳಗಾಗಿದ್ದು, ಅವರ ವರದಿಯೂ ನೆಗೆಟಿವ್ ಬಂದಿದೆ. ಆದರೂ ಅವರು ಕ್ವಾರಂಟೈನ್ಗೆ ಒಳಪಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.