ಕರೊನಾ ವೈರಸ್ ತಡೆಗಟ್ಟುವ ಮುಂಜಾಗ್ರತಾ ಕ್ರಮ ಕುರಿತು ಮಾನ್ವಿ ಪಟ್ಟಣಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ, ಪರಿಶೀಲನೆ

Manvi DC SP Visit
Published on

ಮಾನ್ವಿ: ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕುರಿತು ಪಟ್ಟಣದ ಅಂಬೇಡ್ಕರ್, ಬಸವ ಮತ್ತು ವಾಲ್ಮೀಕಿ ವೃತ್ತ ಸೇರಿ ಇತರೆಡೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಎಸಿ ಡಾ.ಸಿ.ಬಿ.ವೇದಮೂರ್ತಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಟ್ಟಣದಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿರುವ ಲಾಕ್‌ಡೌನ್ ಆದೇಶ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರು ಅನವಶ್ಯಕವಾಗಿ ಮನೆಯಿಂದ ಹೂರಗೆ ಬರಬಾರದು ಮತ್ತು ಗುಂಪಾಗಿ ಸೇರಬಾರದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ತಹಸೀಲ್ದಾರ್ ಅಮರೇಶ ಬಿರಾದಾರ್, ತಾಲೂಕು ವೈದ್ಯಾಧಿಕಾರಿ ಚಂದ್ರಶೇಖರಯ್ಯ, ಸಿಪಿಐ ದತ್ತಾತ್ರೇಯ ಕಾರ್ನಾಡ್, ಪಿಎಸ್‌ಐ ರಂಗಪ್ಪ ಎಚ್.ದೊಡ್ಡಮನಿ, ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net