ವಿಧಾನಸಭೆ ಚುನಾವಣೆಗೆ ಮುನ್ನವೇ ನಿಗಮ ಮಂಡಳಿ ಆಫರ್!

DKS
Published on

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಯಸಿ ಪಕ್ಷದ ಟಿಕೆಟ್‌ಗೆ ಅರ್ಜಿ ಹಾಕಿರುವವರ ಪೈಕಿ ಅವಕಾಶ ವಂಚಿತರಿಗೆ ಕಾಂಗ್ರೆಸ್ ಕಡೆಯಿಂದ ಚುನಾವಣೆ ಪೂರ್ವದಲ್ಲೇ ನಿಗಮ ಮಂಡಳಿ ಆಫರ್ ನೀಡಲಾಗುತ್ತಿದೆ.

ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರನ್ನು ಹೇಗೆ ನಿಭಾಯಿಸುತ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚಿಕ್ಕಮಗಳೂರಿನಲ್ಲಿ ಹೋಗಿ ಎಲ್ಲರ ಜತೆ ಮಾತನಾಡಿದ್ದೇನೆ. ಪಕ್ಷ ಇದ್ದರಷ್ಟೇ ಅಧಿಕಾರ ಅನುಭವಿಸಬಹುದು. ಪಕ್ಷ ಅಧಿಕಾರಕ್ಕೆ ಬಂದರೆ ನಾವು ಅಧಿಕಾರ ಅನುಭವಿಸಬಹುದು ಎಂದು ತಿಳಿಸಿದ್ದೇನೆ ಎಂದರು.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳ ಅಧಿಕಾರ ಇದೆ, 75 ಪರಿಷತ್ ಸ್ಥಾನ, 16 ರಾಜ್ಯಸಭಾ ಸ್ಥಾನಗಳಿದ್ದು, ಅರ್ಹತೆಗೆ ತಕ್ಕಂತೆ ಎಲ್ಲರಿಗೂ ನಾವು ಅಧಿಕಾರ ನೀಡುತ್ತೇವೆ. ನಮ್ಮ ಪಕ್ಷದಲ್ಲಿ ಶಾಸಕರಾಗಬೇಕು ಎಂದು ಬಹಳ ಹುರುಪಿನಿಂದ 1350 ಜನ ಅರ್ಜಿ ಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ದಟ್ಟವಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net