

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 2025- 26ನೇ ಸಾಲಿನ ಆಯವ್ಯಯಕ್ಕೆ ಸಂಬ0ಧಿಸಿ ನಗರದ ಅಮೃತ ಮಹೋತ್ಸವ ಸಭಾಭವನದಲ್ಲಿ ಶುಕ್ರವಾರ ಸಾರ್ವಜನಿಕರ ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲಾಯಿತು.
ಮೇಯರ್ ರಾಮಣ್ಣ ಬಡಿಗೇರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು, ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಬಜೆಟ್‌ನಲ್ಲಿ ಅಳವಡಿಸಬೇಕಾದ ಕಾಮಗಾರಿಗಳು, ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಉಪ ಮೇಯರ್ ದುರ್ಗಮ್ಮ ಬಿಜವಾಡ, ತೆರಿಗೆ ನಿರ್ಧರಣಾ, ಹಣಕಾಸು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಮನಗುಂಡಿ, ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಪ್ರತಿಪಕ್ಷ ನಾಯಕ ರಾಜಶೇಖರ ಕಮತಿ, ಮುಖ್ಯ ಲೆಕ್ಕಾಽಕಾರಿ ಟಿ.ಬಿ. ವಿಶ್ವನಾಥ, ಪಾಲಿಕೆ ಸದಸ್ಯರಾದ ಮಂಜುನಾಥ ಬುರ್ಲಿ, ರೂಪಾ ಶೆಟ್ಟಿ, ಸರತಾಜ ಅಧೋನಿ, ರತ್ನಾಬಾಯಿ ನಾಝರೆ, ಕವಿತಾ ಕಬ್ಬೇರ, ಮಂಜುನಾಥ ಬಟ್ಟೆಣ್ಣವರ, ಶಂಭು ಸಾಲಮನಿ, ಚಂದ್ರಕಲಾ ಕೊಟಬಾಗಿ, ಇತರರಿದ್ದರು.