ಸೇವಾ ಭದ್ರತೆಗೆ ಒತ್ತಾಯಿಸಿ ಪಾಲಿಕೆ ಗುತ್ತಿಗೆ ಶಿಕ್ಷಕರ ಪ್ರತಿಭಟನೆ

teachers potest
Published on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲಾ-ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಉಪನ್ಯಾಸಕರು ಸೇವಾ ಭದ್ರತೆಗೆ ಒತ್ತಾಯಿಸಿ ಸೋಮವಾರ ಪಾಲಿಕೆಯ ಕೇಂದ್ರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ದಶಕಗಳಿಂದ ಸೇವಾ ಕಾಯಂ ಇಲ್ಲದೆ ಹೊರ ಗುತ್ತಿಗೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರಣ ಕಡಿಮೆ ಸಂಬಳ ನೀಡಲಾಗುತ್ತಿದೆ. ಬಡ್ತಿ, ಗೌರವಧನ ಹೆಚ್ಚಳ ಮಾಡದಿರುವುದು ಹಲವರ ವಯೋಮಿತಿ ಏರುತ್ತಿದೆ. ಅತಿಥಿ ಉಪನ್ಯಾಸಕರಿಗೆ ನೀಡುವ ಸೌಲಭ್ಯಗಳನ್ನು ಗುತ್ತಿಗೆ ಶಿಕ್ಷಕರಿಗೆ ವಿಸ್ತರಿಸದಿರುವುದು ಭಾರಿ ಸಮಸ್ಯೆಯಾಗಿದೆ ಎಂದು ಪ್ರತಿಭಟನಾಕಾರರು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರು.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಲೋಕೇಶ್ ಎನ್, 2007ರಿಂದ ಬಿಬಿಎಂಪಿ ವತಿಯಿಂದ ನೇರವಾಗಿ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ಗುತ್ತಿದೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಆದರೆ, ಮರುವರ್ಷದಿಂದ ಒಳಗುತ್ತಿಗೆ ಅಡಿಯಲ್ಲಿ ಏಜೆನ್ಸಿ ಮೂಲಕ ವೇತನ ಪಾವತಿ ಮಾಡಲಾಗುತ್ತಿದೆ. ಆದರೆ, ಪಾಲಿಕೆ ಏಜೆನ್ಸಿಗೆ ಪಾವತಿಸುವ ಮೊತ್ತಕ್ಕಿಂತ ಕಡಿಮೆ ಹಣವನ್ನು ಶಿಕ್ಷಕ ಸಮುದಾಯಕ್ಕೆ ಸಂದಾಯ ಮಾಡಿ ಅನ್ಯಾಯ ಎಸಗಲಾಗಿದೆ. ಈ ತಾರತಮ್ಯ ನಿವಾರಿಸಬೇಕು ಎಂದು ಅವರು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net