ಫಾಸ್ಟ್ ಫುಡ್ ಮಳಿಗೆಗಳ ಮೇಲೆ ಪಾಲಿಕೆ ಅಧಿಕಾರಿಗಳ ದಾಳಿ

ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ರಸ್ತೆಬದಿ ಫಾಸ್ಟ್ ಫುಡ್ ಮಳಿಗೆಗಳ ಮೇಲೆ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ‘ಅಜಿನೋಮೋಟೊ’ ಪದಾರ್ಥವನ್ನು ಜಪ್ತಿ ಮಾಡಿದ್ದಾರೆ.
ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ರಸ್ತೆಬದಿ ಫಾಸ್ಟ್ ಫುಡ್ ಮಳಿಗೆಗಳ ಮೇಲೆ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ‘ಅಜಿನೋಮೋಟೊ’ ಪದಾರ್ಥವನ್ನು ಜಪ್ತಿ ಮಾಡಿದ್ದಾರೆ.
Published on
ಮಂಗಳೂರು: ನಗರದ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ರಸ್ತೆಬದಿ ಫಾಸ್ಟ್ ಫುಡ್ ಮಳಿಗೆಗಳ ಮೇಲೆ ಪಾಲಿಕೆಯ ಆರೋಗ್ಯ ಅಧಿಕಾರಿಗಳ ತಂಡವು ತಪಾಸಣೆ ನಡೆಸಿದ್ದು, ನಿಯಮ ಬಾಹಿರವಾಗಿ ಬಳಸಲಾಗುತ್ತಿದ್ದ ಸಾರ್ವಜನಿಕ ಆರೋಗ್ಯಕ್ಕೆ ಹಾನಿಕರವಾದ ‘ಅಜಿನೋಮೋಟೊ’ ಪದಾರ್ಥವನ್ನು ಪತ್ತೆ ಹಚ್ಚಿ ಜಪ್ತಿ ಮಾಡಿದೆ.
ರಸ್ತೆಬದಿ ಸಿಗುವ ಫಾಸ್ಟ್ ಫುಡ್ ಹಾಗೂ ತಿನಿಸುಗಳಿಗೆ ರುಚಿ ಹೆಚ್ಚಿಸಲು ಕಾನೂನುಬಾಹಿರವಾಗಿ ಮತ್ತು ಅತಿಯಾಗಿ ಅಜಿನೋಮೋಟೊ ರಾಸಾಯನಿಕ ಬಳಸಲಾಗುತ್ತಿತ್ತು. ದಾಳಿ ವೇಳೆ ಅಧಿಕಾರಿಗಳು ಪ್ರತಿಯೊಂದು ಮಳಿಗೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಅಲ್ಲಿದ್ದ ಅಜಿನೋಮೋಟೊ ಸಂಗ್ರಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಆಹಾರ ನೈರ್ಮಲ್ಯ ಮತ್ತು ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬ ವ್ಯಾಪಾರಿಯೂ ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿ ಆರೋಗ್ಯಕ್ಕೆ ಹಾನಿಕರ ರಾಸಾಯನಿಕ ಅಥವಾ ಕಲುಷಿತ ಆಹಾರ ಪದಾರ್ಥಗಳನ್ನು ಬಳಸುವ ಮಳಿಗೆಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net