ಕಾರ್ಪೋರೇಟರ್​ಗೆ ಪಾಸಿಟಿವ್

corona new
Published on

ಬೆಂಗಳೂರು: ಸೀಲ್ ಆಗಿರುವ ಪಾದರಾಯನಪುರ ನಿವಾಸಿಗಳ ಜತೆ ಸಂಪರ್ಕ ಹೊಂದಿದ್ದ ಬಿಬಿಎಂಪಿ ಕಾಪೋರೇಟರ್​ಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಮೂಲಕ ವಾರ್ಡ್ ಅಷ್ಟೇ ಅಲ್ಲದೆ, ಬಿಬಿಎಂಪಿಯಲ್ಲೂ ಆತಂಕ ಸೃಷ್ಟಿ ಆಗುವಂತಾಗಿದೆ.

ಸೋಂಕಿನ ಪ್ರಕರಣ ಹೆಚ್ಚಾಗಿದ್ದ ಪಾದರಾಯನಪುರ ಪ್ರದೇಶವನ್ನು ಸೀಲ್ ಮಾಡಲಾಗಿತ್ತು. ಈ ಪ್ರದೇಶದೊಂದಿಗೆ ಕಾಪೋರೇಟರ್ ನಿತ್ಯ ಸಂಪರ್ಕದಲ್ಲಿದ್ದರು. ಇತ್ತೀಚೆಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಶುಕ್ರವಾರ ಬಂದ ವರದಿಯಂತೆ ಸೋಂಕಿರುವುದು ದೃಢಪಟ್ಟಿದೆ. ಇದೀಗ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಕುಟುಂಬದವರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವುದೇ ಬಿಬಿಎಂಪಿ ಅಧಿಕಾರಿಗಳಿಗೆ ತಲೆನೋವಾಗಿದೆ.

ಸಮಾಧಾನಕರ ವಿಷಯವೆಂದರೆ ಗುರುವಾರ ನಡೆದಿದ್ದ ಬಿಬಿಎಂಪಿ ಕೌನ್ಸಿಲ್ ಸಭೆಗೆ ಹಾಜರಾಗಿರಲಿಲ್ಲ. ಹಾಜರಾಗಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಇನ್ನಷ್ಟು ಸದಸ್ಯರಿಗೂ ಸೋಂಕು ತಗಲುವ ಸಾಧ್ಯತೆಗಳಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net