ಹಾನಗಲ್ಲನಲ್ಲಿ ಮಿತಿ ಮೀರಿದ ಭ್ರಷ್ಟಾಚಾರ

Corruption beyond limits in Hanagal
Published on

ಹಾನಗಲ್ಲ: ಒಂದೇ ವಾರದಲ್ಲಿ ತಾಲೂಕಿನ ಕಂದಾಯ ಇಲಾಖೆಯ ಐವರು ನೌಕರರು ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಇದು ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿ ಮೀರಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಸಮಾಜ ಸೇವಕ ಸಿದ್ದಲಿಂಗಣ್ಣ ಕಮಡೊಳ್ಳಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಆಡಳಿತ ತೀರ ಹದಗೆಟ್ಟಿದೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ಅಲೆದಾಡುತ್ತಿದ್ದಾರೆ. ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಲಂಚಾವತಾರವೇ ಎದ್ದು ಕಾಣುತ್ತಿದೆ. ಇದಕ್ಕೆ ಕಡಿವಾಣ ಹಾಕುವಲ್ಲಿ ಜನಪ್ರತಿನಿಧಿಗಳು ಸೋತಿದ್ದಾರೆ. ಸಾರ್ವಜನಿಕರ ಅಳಲು ಅಹವಾಲು ಕೇಳುವವರಿಲ್ಲದೆ, ಜನ ಬೇಸತ್ತಿದ್ದಾರೆ ಎಂದರು.

ತಾಲೂಕಿನ ರಸ್ತೆಗಳ ಗುಂಡಿ ಮುಚ್ಚಲು ಸರ್ಕಾರದಿಂದ ಆಗುತ್ತಿಲ್ಲ. ವಾಹನ ಚಾಲಕರು, ಮಾಲೀಕರು ನಿತ್ಯಶಾಪ ಹಾಕುತ್ತಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಸಾರ್ವಜನಿಕರ ಸುಲಿಗೆ ನಡೆದಿದೆ. ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಿ ಇನ್ನೊಂದೆಡೆ ಬೆಲೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಹರಿಹಾಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net