ಅಕ್ರಮ ಆಸ್ತಿ ಗಳಿಕೆ; ಡಿಸಿಎಂ ಡಿಕೆ ಶಿವಕುಮಾರ್​‌ಗೆ ಸುಪ್ರೀಂಕೋರ್ಟ್ ನೋಟಿಸ್

dks
Published on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಡಿಕೆಶಿ  ಅವರಿಗೆ ನೋಟಿಸಿ ಜಾರಿ ಮಾಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ತರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಇದನ್ನು ತೆರವು ಕೋರಿ ಸಿಬಿಐ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು(ಅಕ್ಟೋಬರ್ 16) ಸಿಬಿಐನ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.

ಪ್ರಕರಣ: ಡಿಕೆ ಶಿವಕುಮಾರ್ ಅವರು 2023ರಿಂದ 2018ರಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿತ್ತು.

ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಇದೀಗ ಹೈಕೋರ್ಟ್​ನ ಆದೇಶವನ್ನು ತೆರವು ಕೋರಿ ಸುಪ್ರೀಂಕೋರ್ಟ್​ ಮೊರೆ ಹೋಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net