ಬಿಜೆಪಿಗೆ ಭ್ರಷ್ಟಾಚಾರವೇ ಮುಳುವು

State-7-Bandeppa-Kashempur
Published on

ಬಸವಕಲ್ಯಾಣ: ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ನಿಂದ ರಾಜ್ಯದ ಜನತೆ ಬೇಸರಗೊಂಡಿದ್ದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ಒಲವು ಹೊಂದಿದ್ದಾರೆ. ಹೀಗಾಗಿ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಗೆಲ್ಲಿಸಲಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ ಹೇಳಿದರು.

ತಾಲೂಕಿನ ಗೌರ, ಗುತ್ತಿ, ಕೋಟಮಾಳ, ಪರತಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಅವರ ಪರ ಪ್ರಚಾರ ನಡೆಸಿ ಮಾತನಾಡಿ, ಭ್ರಷ್ಟಾಚಾರದಲ್ಲಿ ಮುಳುಗಿರುವುದೇ ಬಿಜೆಪಿಗೆ ಮುಳುವಾಗಲಿದೆ. ಈ ಸರ್ಕಾರದ ಆಡಳಿತ ವ್ಯವಸ್ಥೆಯಿಂದ ಜನ ಬೇಸರಗೊಂಡಿದ್ದಾರೆ.

ಅಧಿಕೃತ ಪ್ರತಿಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ಸಹ ಸರ್ಕಾರದ ವೈಫಲ್ಯ ಹಾಗೂ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ದೂರಿದರು. ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net